Sunday, 2 May 2021

ಪಂಚರಾಜ್ಯ ಚುನಾವಣೆ ಫಲಿತಾಂಶ : ಯಾವ ರಾಜ್ಯದಲ್ಲಿ ಯಾವ ಪಕ್ಷ


ಪಂಚರಾಜ್ಯ ಚುನಾವಣೆ ಫಲಿತಾಂಶ : ಯಾವ ರಾಜ್ಯದಲ್ಲಿ ಯಾವ ಪಕ್ಷ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್, ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್, ಅಸ್ಸಾಂನಲ್ಲಿ ಬಿಜೆಪಿ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದಿವೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : ಪಶ್ಚಿಮಬಂಗಾಳದ ಒಟ್ಟು 294 ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ 215 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಈ ಬಾರಿ 75 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ರೆ, ಕಾಂಗ್ರೆಸ್ 1, ಇತರರು 4 ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳ ವಿಧಾನಸಭೆಯ 140 ಸ್ಥಾನಗಳ ಪೈಕಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸತತ 2 ನೇ ಬಾರಿ ಜಯಭೇರಿ ಬಾರಿಸಿದೆ. ಎಲ್ ಡಿಎಫ್ 99 ಸ್ಥಾನ ಪಡೆದ್ರೆ, ಯುಡಿಎಫ್ 41 ಸ್ಥಾನಗಳನ್ನು ಪಡೆದುಕೊಂಡಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಂಶ : ಅಸ್ಸಾಂನಲ್ಲಿ ಬಿಜೆಪಿ ಸತತ 2 ನೇ ಬಾರಿ ಜಯಗಳಿಸಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ-ಅಸೋಂ ಗಣಪರಿಷತ್ ಹಾಗೂ ಯುನೈಟೈಡ್ ಪೀಪಲ್ಸ್ ಪಕ್ಷ ಈ ಬಾರಿ ಒಟ್ಟಾಗಿ ಮೈತ್ರಿಕೂಟ ರಚಿಸಿಕೊಂಡು ಕಣಕ್ಕಿಳಿದಿದ್ದವು. ಅಸ್ಸಾಂ ವಿಧಾನಸಭೆಯ 126 ಸ್ಥಾನಗಳ ಪೈಕಿ 75 ರಲ್ಲಿ ಬಿಜೆಪಿ ಮೈತ್ರಿಕೂಟ ಜಯಗಳಿಸಿದರೆ, 50 ಸ್ಥಾನಗಳಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆಲುವು ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ : ತಮಿಳುನಾಡು ವಿಧಾನಸಭೆಯ ಒಟ್ಟು 234 ಸ್ಥಾನಗಳ ಪೈಕಿ ಡಿಎಂಕೆ 160 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದೆ. 74 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಅಣ್ಣಾ ಡಿಎಂಕೆ ಪರಾಭವಗೊಂಡಿದೆ.

ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶ : ಪುದುಚೇರಿ ವಿಧಾನಸಭೆ 30 ಸ್ಥಾನಗಳ ಪೈಕಿ ಎನ್ ಆರ್ ಕಾಂಗ್ರೆಸ್, ಬಿಜೆಪಿ-ಅಣ್ಣಾ ಡಿಎಂಕೆ ಮೈತ್ರಿಕೂಟ ಜಯಗಳಿಸಿದೆ. ಎನ್ ಡಿಎ 16 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡಿದೆ.



SHARE THIS

Author:

0 التعليقات: